ಮಡಿಕೇರಿ, ನ. 15: ಜಿಲ್ಲೆಯಲ್ಲಿ ತಾ. 15 ರಂದು ಹೊಸದಾಗಿ 13 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 78,920 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,167 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,998 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 99 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 19 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 80 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 111 ನಿಯಂತ್ರಿತ ವಲಯಗಳಿವೆ.