ಸಿದ್ದಾಪುರ, ನ. 11: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸಂದರ್ಭ ಪೆÇಲೀಸರು ದಾಳಿ ನಡೆಸಿದ ಘಟನೆ ಸಿದ್ದಾಪುರದ ಕೂಡುಗದ್ದೆ ಗ್ರಾಮದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಜೀಪಿನಲ್ಲಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಪೆÇಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳು ಕತ್ತಲಲ್ಲಿ ಪರಾರಿಯಾಗಿದ್ದಾರೆ. ವಾಹನವನ್ನು ಪೆÇಲೀಸರು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.