ಸೋಮವಾರಪೇಟೆ, ನ. 17: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾ. 21ರಂದು ತಾಲೂಕಿನ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿಗೆ ಭಾವಗೀತೆ ಗಾಯನ ಸ್ಪರ್ಧೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಕಸಾಪದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ. ಪಾಂಡು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯೋಪಾಧ್ಯಾಯರಾದ ಎಂ.ಜೆ. ಅಣ್ಣಮ್ಮ, ಕೊಡಗು ಜಿಲ್ಲಾ ಕಸಾಪದ ಕೋಶಾಧಿಕಾರಿ ಎಸ್.ಎ. ಮುರಳೀಧರ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಳಿನಿ ಗಣೇಶ್, ಉಪಾಧ್ಯಕ್ಷರಾದ ಬಿ. ಸಂಜೀವ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಎಲ್.ಎಂ. ಪ್ರೇಮ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಕಸಾಪ ಗೌರವ ಕಾರ್ಯದರ್ಶಿ ಡಿ.ಪಿ. ಲೋಕೇಶ್ ತಿಳಿಸಿದ್ದಾರೆ.