ಸುಂಟಿಕೊಪ್ಪ, ನ. 17: ಮನೆಯ ಸಮೀಪ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಅಪ್ಪ, ಮಗನನ್ನು ಸುಂಟಿಕೊಪ್ಪ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ಹರದೂರಿನ ಮನಮೋಹನ್ ಹಾಗೂ ಆತನ ಮಗ ನಿತಿನ್ ಇಬ್ಬರೂ ಸೇರಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಡಿ.ಎಸ್. ಪುನೀತ್ ಅವರು ಪೊಲೀಸ್ ಅಧೀಕ್ಷಕ ಶೈಲೇಂದ್ರ, ಕುಶಾಲನಗರ ವೃತ್ತ ನಿರೀಕ್ಷಕರಾದ ಮಹೇಶ್ ನಿರ್ದೇಶನದ ಮೇರೆ ಸ್ಥಳಕ್ಕೆ ದಾಳಿ ಮಾಡಿ 2 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಾರ್ಯಾಚರಣೆಯಲ್ಲಿ ಮುಖ್ಯಪೇದೆ ಸತೀಶ್, ಖಾದರ್ ಪಾಲ್ಗೊಂಡಿದ್ದರು.