ಮಡಿಕೇರಿ, ನ. 17: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ತಾ. 19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿಸಿಸಿ ಪದಾಧಿಕಾರಿಗಳು, ಸದಸ್ಯರು, ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ರಾಜ್ಯದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಪ್ರತಿಭಟನೆ: ಇಂದಿರಾ ಜನ್ಮ ದಿನಾಚರಣೆ ನಂತರ 11 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ, ರಾಜ್ಯ ಸರ್ಕಾರದ ವಿದ್ಯುತ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.