ಮಡಿಕೇರಿ, ನ. 11: ರಾಜ್ಯ ಉಚ್ಚ ನ್ಯಾಯಾಲಯವು ಜಿಲ್ಲಾ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ ಆದೇಶಿಸಿದೆ. ಕೊಡಗು ಜಿಲ್ಲಾ ಪ್ರಿನ್ಸಿಪಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ರಾಯಚೂರು ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಲಿಕಾರ್ಜುನ ಗೌಡ ಅವರ ಸ್ಥಾನಕ್ಕೆ ದಾವಣಗೆರೆಯ ಪ್ರಿನ್ಸಿಪಲ್ ನ್ಯಾಯಾಧೀಶ, ಫ್ಯಾಮಿಲಿ ಕೋರ್ಟ್ನ ಜಿನರಾಲ್ಕ್ರ್ ಭೀಮರಾವ್ ಲಗಮಪ್ಪ ಅವರನ್ನು ನೇಮಕ ಮಾಡಲಾಗಿದೆ.