ಮಡಿಕೇರಿ, ನ. 17: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿರುವ ಹಿರಿಯ ಸಹಕಾರಿ ಧುರೀಣ ಮಾತಂಡ ರಮೇಶ್ ಅವರು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ತಾ. 14 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.