ಮಡಿಕೇರಿ, ನ. 11: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 70 ಕ್ಕೇರಿದೆ. ಪಾಲಿಬೆಟ್ಟದ 38 ವ್ಸರ್Àದ ಪುರ್ಸುÀ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ತಾ. 11 ರಂದು ಹೊಸದಾಗಿ 22 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 76,628 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,114 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,907 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 137 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 24 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 113 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 129 ನಿಯಂತ್ರಿತ ವಲಯಗಳಿವೆ.