ಮಡಿಕೇರಿ, ನ. 17: ಜಿಲ್ಲೆಯಲ್ಲಿ ತಾ. 17 ರಂದು ಹೊಸದಾಗಿ 8 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 80,681 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,195 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,027 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 98 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 23 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 75 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 110 ನಿಯಂತ್ರಿತ ವಲಯಗಳಿವೆ.