ಶಿವು ಮಾದಪ್ಪ

ಮಡಿಕೇರಿ, ನ. 18: ಕೊಡಗು ಜಿಲ್ಲೆಯಲ್ಲಿಯೂ ತಾ. 17 ರಂದು ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಕೊರೊನಾ ಕಾರಣದಿಂದಾಗಿ ಈ ತನಕ ಶಾಲಾ - ಕಾಲೇಜುಗಳು ತೆರೆಯಲ್ಪಟ್ಟಿರಲಿಲ್ಲ. ಆದರೆ ಇದೀಗ ಸರಕಾರ ಅನುಮತಿ ನೀಡಿದೆಯಾದರೂ. ಕೊಡಗು ಜಿಲ್ಲೆಯ ಪರಿಸ್ಥಿತಿ ವಿಭಿನ್ನವಾಗಿರುವುದರಿಂದ ಇದು ಸೂಕ್ತ ನಿರ್ಧಾರವಲ್ಲ ಎಂದು ಜಿ.ಪಂ. ಸದಸ್ಯ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಮುಂದುವರಿಯುತ್ತಲೇ ಇವೆ. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಸೂಕ್ತ ಆಸ್ಪತ್ರೆಗಳು ಇಲ್ಲ. ಇತ್ತೀಚೆಗೆ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ನಿರ್ಧರಿಸಲಾಗಿದೆ. ಈ ಕಾರಣದಿಂದ ಇದನ್ನು ಮುಂದುವರಿಸುವುದು ಸೂಕ್ತ ಅಲ್ಲ ಎಂದು ಅವರು ಹೇಳಿದ್ದಾರೆ.