ಮಡಿಕೇರಿ, ನ.18: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರನ್ನಾಗಿ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಪ್ರತಿನಿಧಿಯಾಗಿ ಮಕ್ಕಳ ತಜ್ಞ ಡಾ. ಬಿ.ಸಿ. ನವೀನ್‍ಕುಮಾರ್, ಸಾಮಾಜಿಕ ಕ್ಷೇತ್ರದ ಪ್ರತಿನಿಧಿಯಾಗಿ ವಕೀಲ ನಿರಂಜನ್ ಎಂ.ಎ., ಸರ್ಕಾರೇತರ ಸಂಸ್ಥೆಯ ಮಹಿಳಾ ಪ್ರತಿನಿಧಿಯಾಗಿ ವೈದ್ಯೆ ಡಾ. ಜಯಲಕ್ಷ್ಮಿ ಪಾಟ್ಕರ್ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ತಿಳಿಸಿದ್ದಾರೆ.