ಮಡಿಕೇರಿ, ನ. 18: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪತ್ರಿಕಾ ಭವನ ಟ್ರಸ್ ಸ್ಥಾಪಕಾಧ್ಯಕ್ಷ ಟಿ.ಪಿ. ರಮೇಶ್, ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆಯ ಸಂಸ್ಥಾಪಕರಾಗಿ ವಿದ್ಯಾಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಿದ್ದರು. ಉಪಾಧ್ಯಕ್ಷರುಗಳಾದ ಎಂ.ಇ. ಮೊಹಿದ್ದಿನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ವಿಲ್ಫ್ರೆಡ್ ಕ್ರಾಸ್ತಾ, ನಿರ್ದೇಶಕರುಗಳಾದ ಎಸ್.ಐ. ಮುನೀರ್ ಅಹಮದ್, ಲಿಯಾಕತ್ ಆಲಿ, ಮನು ಶೆಣೈ, ಕಡ್ಲೆರ ತುಳಸಿ ಮೋಹನ್, ಅಂಬೆಕಲ್ ನವೀನ್, ಕೆ.ವಿ. ಉಮೇಶ್, ಟಿ.ಜಿ. ಪ್ರೇಮ್ ಕುಮಾರ್ ಉಪಸ್ಥಿತರಿದ್ದರು.