ಮಡಿಕೇರಿ, ನ. 18: ಜಿಲ್ಲಾ ಸಹಕರ ಯೂನಿಯನ್ ನಿಯಮಿತ, ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಮಡಿಕೇರಿ ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಮುಕ್ತಾಯ ಸಮಾರಂಭದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ಡಿಜಿಟಲೈಜೇಷನ್ ಮತ್ತು ಸಾಮಾಜಿಕ ಜಾಲತಾಣ ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ತಾ. 20 ರಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿದೋದ್ಧೇಶ ಸಹಕಾರ ಸಂಘದ ಸಭಾಂಗಣ, ಕೊಹಿನೂರು ರಸ್ತೆ, ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.