ಮಡಿಕೇರಿ, ನ. 18: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಸೋಮವಾರಪೇಟೆ ತಾಲೂಕು ಸಹಕಾರ ಕೂಟ, ಶಿರಂಗಾಲ, ತೊರೆನೂರು, ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಯುವಜನ, ಮಹಿಳಾ ಮತ್ತು ಅಬಲವರ್ಗದವರಿಗಾಗಿ ಸಹಕಾರ ಸಂಸ್ಥೆಗಳು ದಿನಾಚರಣೆಯು ತಾ. 19 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಶಿರಂಗಾಲದ ದೇವತಾ ಸಮಿತಿ ಕಾರ್ಯಾಲಯದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತಪ್ಪ, ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಶಿರಂಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಜಿ.ಪಂ. ಸದಸ್ಯ ಹೆಚ್.ಆರ್. ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.