ಮಡಿಕೇರಿ, ನ.18: ಪೊನ್ನಂಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಳೆಯ ಬ್ರೇಕರ್ ಬದಲಾಯಿಸಿ ಹೊಸ ಬ್ರೇಕರ್‍ನ್ನು ಅಳವಡಿಸುವ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯಂತೆ ತಾ. 20 ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹೊಸ ಬ್ರೇಕರ್‍ಗಳನ್ನು ಅಳವಡಿಸುವ ಕಾಮಗಾರಿ ನಿರ್ವಹಿಸುವುದರಿಂದ ಮುಂದಿನ 30 ದಿನಗಳ ಕಾಲ ನಲ್ಲೂರು, ಬಾಳೆಲೆ, ಹುದಿಕೇರಿ, ತಿತಿಮತಿ, ಪಾಲಿಬೆಟ್ಟ, ಹುದಿಕೇರಿ, ಗೋಣಿಕೊಪ್ಪಲು, ಪೊನ್ನಂಪೇಟೆ, ಹಾತ್ತೂರು, ಹೈಸೊಡ್ಲೂರು ರಾಜಪುರ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಾಗೆಯೇ ಸಿದ್ದಾಪುರ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಫಿüೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸಿದ್ದಾಪುರ, ಗುಯ್ಯ, ಕರಡಿಗೋಡು, ಅವರೆಗುಂದ, ಬಸವನಹಳ್ಳಿ, ಇಂಜಿಲಗೇರಿ, ಪುಲಿಯೇರಿ, ಮಾಲ್ದಾರೆ, ಬಾಡಗ-ಬಾಣಾಂಗಾಲ, ಬಜೆಗೊಲ್ಲಿ, ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.