ಮಡಿಕೇರಿ, ನ. 18: ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಗೊಳಪಡುವ ಮಕ್ಕಂದೂರು, ಮುಕ್ಕೋಡ್ಲು ಗ್ರಾಮಗಳ 2020-21ನೇ ಸಾಲಿನ ಗ್ರಾಮ ಸಭೆ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಮಕ್ಕಂದೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಆಡಳಿತಾಧಿಕಾರಿ ಕೆ. ರಾಜು (ಉಪ ನಿರ್ದೇಶಕರು, ಕೃಷಿ ಇಲಾಖೆ) ಇವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಮೋಹನ್ ಕುಮಾರ್ (ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ) ಇವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.