ಕೂಡಿಗೆ, ನ. 18: ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು, ವಿಶೇಷಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಹಯೋಗ ದೊಂದಿಗೆ ಕೂಡಿಗೆಯ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕ ದಿನಾಚರಣೆ ನಡೆಯಿತು.
ಉದ್ಘಾಟನೆಯನ್ನು ಕೂಡಿಗೆ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ನೆರವೇರಿಸಿದರು. ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್ ಕುಮಾರ್, ಶಕ್ತಿ ವೃದ್ಧಾಶ್ರಮ ಕೇಂದ್ರದ ವ್ಯವಸ್ಥಾಪಕ ಚಂದ್ರು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.