ಮಡಿಕೇರಿ, ನ. 18: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 71ಕ್ಕೇರಿದೆ. ಸೋಮವಾರಪೇಟೆ ತಾಲೂಕಿನ ಗೋಣಿಮರೂರಿನ ಎರೆಪಾರೆಯ 49 ವರ್ಷದ ಪುರುಷ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತಾ.18 ರಂದು ಹೊಸದಾಗಿ 13 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 81,792 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,208 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,056 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು 81 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 26 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 55 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 104 ನಿಯಂತ್ರಿತ ವಲಯಗಳಿವೆ.