ಮಡಿಕೇರಿ, ನ. 19: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದೆ.
67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೂ ಪ್ರಶಸ್ತಿ ಪ್ರದಾನ, ಸನ್ಮಾನ ಕಾರ್ಯಕ್ರಮ ತಾ. 20 ರಂದು (ಇಂದು) ನಡೆಯಲಿದೆ. ಮಡಿಕೇರಿಯ ಕೊಹಿನೂರ್ ರಸ್ತೆಯಲ್ಲಿರುವ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.