ಮಡಿಕೇರಿ, ನ. 19: ಜಿಲ್ಲೆಯಲ್ಲಿ ತಾ. 19 ರಂದು ಹೊಸದಾಗಿ 14 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 82,521 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,222 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,061 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು 90 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 21 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 69 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 92 ನಿಯಂತ್ರಿತ ವಲಯಗಳಿವೆ.