ಮಡಿಕೇರಿ, ನ. 19: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಸಂಘದ ಕ್ರೀಡಾ ಸಮಿತಿ ಆಶ್ರಯದಲ್ಲಿ ಇದೇ ತಾ. 21 ರಂದು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಜಿಲ್ಲೆಯ ಪತ್ರಕರ್ತರೇ ಪಾಲ್ಗೊಳ್ಳುವ ಕ್ರಿಕೆಟ್ ಪಂದ್ಯಾವಳಿ, ಮಡಿಕೇರಿಯ ಫೀ. ಮಾ. ಕಾರ್ಯಪ್ಪ್ಪ ಕಾಲೇಜಿನಲ್ಲಿ ನಡೆಯಲಿದೆ.

ಡ್ರೀಮ್ ಇಲೆವೆನ್ (ನಾಯಕ ಮುಸ್ತಾಫ), ಪ್ರೆಸಿಡೆಂಟ್ ಇಲೆವೆನ್ (ನಾಯಕ ಶಿವರಾಜ್), ಫಾರೆಸ್ಟ್ ಫ್ಲವರ್ (ಪ್ರೇಂಕುಮಾರ್), ಮಾಸ್ಟರ್ ಬ್ಯಾಟರ್ಸ್(ಆದರ್ಶ್), ಟೀಮ್ ಟ್ವೆಲ್ವ್ (ಪಾರ್ಥ ಚಿಣ್ಣಪ್ಪ) ಹಾಗೂ ಡ್ರೀಮ್ ಹಂಟರ್ಸ್ (ಹೇಮಂತ್) ತಂಡಗಳು ಪಾಲ್ಗೊಳ್ಳಲಿವೆ.

ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಫೀ.ಮಾ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಅನು ಕಾರ್ಯಪ್ಪ, ಪ್ರೆಸ್‍ಕ್ಲಬ್ ಅಧ್ಯಕ್ಷ ರಮೇಶ್ ಕುಟ್ಟಪ್ಪ, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ಸಣ್ಣುವಂಡ ಚಂಗಪ್ಪ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್. ಮಹೇಶ್ ಹಾಗೂ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಹರೀಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

ಸಂಜೆ ನಡೆಯುವ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭಕ್ಕೆ ಮುಖ್ಯಅತಿಥಿಗಳಾಗಿ ಮಡಿಕೇರಿ ನಗರಸಭೆ ಪೌರಾಯುಕ್ತ ರಾಮದಾಸ್ ಆಗಮಿಸಲಿದ್ದಾರೆ. ಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಮುರಳಿಧರ್, ಉದ್ಯಮಿಗಳಾದ ಶರೀನ್, ಜಗದೀಶ್ ರೈ ಹಾಗೂ ಲೋಕೇಶ್ ಪಾಲ್ಗೊಳ್ಳಲಿದ್ದಾರೆ. ಎರಡೂ ಸಮಾರಂಭಗಳ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಹಾಗೂ ಕ್ರೀಡಾ ಸಂಚಾಲಕ ಸುವರ್ಣ ಮಂಜು ತಿಳಿಸಿದ್ದಾರೆ.