ನಾಪೋಕ್ಲು, ನ. 19: ವಿವಿಧ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಕ್ತರು ದೇವಾಲಯಗಳಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಕ್ಕುಂದಕಾಡಿನ ವೆಂಕಟೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿz್ದÀು, ಒಂದು ತಿಂಗಳವರೆಗೆ ದೇವಾಲಯದಲ್ಲಿ ದೀಪೋತ್ಸ ವವನ್ನು ಆಚರಿಸಲಾಗುವುದು. ಭಕ್ತರು ಪೂಜಾಕೈಂಕರ್ಯಗಳನ್ನು ನೆರವೇರಿಸಿದರು.

ಶ್ರೀ ದೇವಿರಮ್ಮ ದೇವಾಲಯ

ಶನಿವಾರಸಂತೆ ಸಮೀಪದ ಬೆಟ್ಟದಳ್ಳಿ ಗ್ರಾಮದ ಬೆಟ್ಟದ ಮೇಲಿನ ಶ್ರೀದೇವಿರಮ್ಮ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಯಿತು. ಹಬ್ಬದ ದಿನ ಬೆಳಿಗ್ಗೆ ಅರ್ಚಕರು, ಕಲಶ ಹೊತ್ತ ಮಹಿಳೆಯರು ಹಾಗೂ ಭಕ್ತರು ದೇವಿರಮ್ಮ ಮೂರ್ತಿಯನ್ನು ಮೆರವಣಿಗೆಯಲ್ಲಿ ಗಂಗಸ್ನಾನಕ್ಕೆ ಕೊಂಡೊಯ್ದರು. ಬಳಿಕ ದೇವಾಲಯದಲ್ಲಿ ದೇವಿಗೆ ಹೋಮ ಹವನ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಇತ್ಯಾದಿ ಪೂಜಾ ಕೈಂಕರ್ಯ ನೆರವೇರಿಸಿದರು. ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.