ಮಡಿಕೇರಿ, ನ. 19: ಹಾಸನ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರಿಗೆ ಸನ್ಮಾನ ನಡೆಯಿತು.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ ಪುಷ್ಪಾ ಅಮರ್ ನಾಥ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪಧಾದಿಕಾರಿಗಳು ಮೈಸೂರು ಪೇಟ ತೊಡಿಸಿ ವೀಣಾ ಅಚ್ಚಯ್ಯ ಅವರನ್ನು ಸನ್ಮಾನಿಸಿದರು.
ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.