ಮಡಿಕೇರಿ, ನ. 19: ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ತಾ. 23 ರ ಸಂಜೆ 6 ಗಂಟೆಯಿಂದ 7 ಗಂಟೆವರೆಗೆ ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮಗಳು ಮೇಕೇರಿಯಲ್ಲಿರುವ ಸತ್ಯಸಾಯಿ ಮಂದಿರದಲ್ಲಿ ನಡೆಯಲಿದೆ. ಪ್ರತಿ ಗುರುವಾರ ಸಂಜೆ 6 ರಿಂದ 7 ಗಂಟೆವರೆಗೆ ಸಾಯಿ ಭಜನೆ ಕಾರ್ಯಕ್ರಮ ಇರುತ್ತದೆ ಎಂದು ಮಡಿಕೇರಿಯ ಶ್ರೀ ಸತ್ಯ ಸಾಯಿ ಸಮಿತಿ ಪ್ರಕಟಣೆ ತಿಳಿಸಿದೆ.