ವೀರಾಜಪೇಟೆ, ನ. 20: ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಲಭಿಸುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ ಬೊಪಯ್ಯ ಹೇಳಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅರವÀಳಿಕೆ ತಜ್ಞರನ್ನು ಹೊರತು ಪಡಿಸಿ ಉಳಿದ ಎಲ್ಲಾ ಕಾಯಿಲೆಗಳಿಗೆ ವೈದ್ಯರು ಲಭ್ಯವಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗುವಂತೆ ಆಸ್ಪತ್ರೆಯ ಆವರಣದಲ್ಲಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಅತಿ ಕಡಿಮೆ ದರದಲ್ಲಿ ಔಷಧಿ ಲಭಿಸುತ್ತಿದೆ. ಕೇಂದ್ರ ಸರ್ಕಾರದಿಂದ 5 ವೆಂಟಿಲೇಟರ್‍ಗಳು ಬಂದಿವೆ ಎಂದು ಹೇಳಿದರು.

ಇದೇ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಉಪಾಧ್ಯಕ್ಷ ಹರ್ಷವರ್ಧನ್, ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘು ನಾಣಯ್ಯ, ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ, ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.