ಸೋಮವಾರಪೇಟೆ,ನ20: ಕಂದಾಯ ಇಲಾಖೆಯ ವತಿಯಿಂದ ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೌತಿ ಖಾತೆ ಆಂದೋಲನವನ್ನು ತಾ. 21ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ಪೌತಿ ಖಾತೆಗೆ ಸಂಬಂಧಿಸಿದಂತೆ ಅರ್ಜಿಗಳ ಸ್ವೀಕಾರ, ಫಲಾನುಭವಿಗಳಿಗೆ ಮಾಹಿತಿ ನೀಡಲಾಗುವದು. ಸಾರ್ವಜನಿಕರು ಸಭೆಯಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.