ಮಡಿಕೇರಿ, ನ. 20: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದ ರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 21 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವೀರಾಜಪೇಟೆ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವೀರಾಜಪೇಟೆ, ಬಿ. ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.