ನಾಪೋಕ್ಲು, ನ. 20: ಸಮೀಪದ ಚೆಯ್ಯಂಡಾಣೆಯಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕದ ಬಳಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿತ್ತು. ಮಡಿಕೇರಿ ಕೃಷಿ ಸಂಶೋಧನಾ ಕೇಂದ್ರದ ವಿಷಯ ತಜ್ಞೆ ವಿದ್ಯಾಶ್ರೀ ತಾಂತ್ರಿಕ ಮಾಹಿತಿ ನೀಡಿದರು.

ಪಿ.ಎಸ್. ಮಾದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಡಿಕೇರಿ ತಾಲೂಕಿನ ತಾಂತ್ರಿಕ ಅಧಿಕಾರಿ ನಾರಾಯಣ ರೆಡ್ಡಿ ಹಾಗೂ ನಾಪೋಕ್ಲುವಿನ ಕೃಷಿ ಅಧಿಕಾರಿ ಜಯರಾಂ ಮತ್ತಿತರರು ಹಾಜರಿದ್ದರು. ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. - ದುಗ್ಗಳ