ಜಿಲ್ಲೆಯಲ್ಲಿ ತಾ.20 ರಂದು ಹೊಸದಾಗಿ 13 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 84,054 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,242 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,090 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು 81 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 19 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 60 ಮಂದಿ ಹೋಮ್ ಐಸೋಲ್ಸೇÀನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 83 £ಯಂತ್ರಿತ ವಲಯಗಳಿವೆ.