ಮಡಿಕೇರಿ, ನ. 21: ಕೊಡಗು ಜಿಲ್ಲೆ ಮಾಜಿ ಸೈನಿಕರ ಸಂಘದ 2020-21ನೇ ಸಾಲಿನ ಮಹಾಸಭೆ ತಾ. 29 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಸರಕಾರಿ ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಸಮುದ್ರದಲ್ಲಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಅಧ್ಯಕ್ಷ ಮೇಜರ್ ಜನರಲ್ ಬಿ.ಎ. ಕಾರ್ಯಪ್ಪ (ನಿ) ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಭೆಗೆ ಕೊಡಗು ಜಿಲ್ಲಾ ಎಲ್ಲಾ ಮಾಜಿ ಸೈನಿಕರು ಮತ್ತು ಅವಲಂಬಿತರು ಹಾಜರಾಗುವಂತೆ ಕೋರಲಾಗಿದೆ. ಕೋವಿಡ್-19 ಇರುವುದರಿಂದ ಆದಷ್ಟು ಸರಳವಾಗಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮೇಜರ್ ಒ.ಎಸ್. ಚಿಂಗಪ್ಪ (ನಿ) ಮೊಬೈಲ್ ಸಂಖ್ಯೆ 9845331431 ಅವರನ್ನು ಸಂಪರ್ಕಿಸಬಹುದಾಗಿದೆ.