ಮಡಿಕೇರಿ, ನ. 22: 2020-21ನೇ ಶೈಕ್ಷಣಿಕ ಸಾಲಿನಿಂದ ಕೊಡವ ಭಾಷಾ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕಾರ್ಯಕ್ರಮ ಪ್ರಾರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯ ಷರತ್ತುಬದ್ಧ ಅನುಮತಿಯನ್ನು ನೀಡಿ ಆದೇಶ ಹೊರಡಿಸಿದೆ.ಈ ಕುರಿತಾಗಿ ಇತ್ತೀಚೆಗೆ ವಿ.ವಿ.ಯ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇದರ ಕುರಿತಾಗಿ ನಗರದ ಫಿ.ಮಾ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಇದರ ಪ್ರಾರಂಭಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಈ ಅನುಮತಿಯ ಸರ್ಟಿಫಿಕೇಟ್ ಕಾರ್ಯಕ್ರಮಕ್ಕೆ 10+2 ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳನ್ನು ಪ್ರವೇಶಾತಿ ಮಾಡುವ ಷರತ್ತಿಗೊಳಪಟ್ಟಿರುವುದಾಗಿ ಕೊಡವ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಪಾವರ್Àತಿ ಅಪ್ಪಯ್ಯ ಅವರು ಮಾಹಿತಿ ನೀಡಿದ್ದಾರೆ.