ಕುಶಾಲನಗರ, ನ. 22: ಗ್ರಾಮ ಪಂಚಾಯತ್ ನೌಕರರು ನವೆಂಬರ್ 26 ರಂದು ರಾಜ್ಯವ್ಯಾಪಿ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿರುವುದಾಗಿ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಆರ್ ಭರತ್ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯತಿ ನೌಕರರು ಇತ್ತೀಚಿನ ದಿನಗಳಲ್ಲಿ ಹಲವು ತಿಂಗಳಿನಿಂದ ವೇತನ ದೊರಕದೆ ಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ನೌಕರರ ಕುಟುಂಬ ಸಮಸ್ಯೆಗೆ ಒಳಗಾಗುತ್ತಿದೆ. ಪಂಚಾಯತಿ ನೌಕರರಿಗೆ ಬಡ್ತಿ ಸೌಲಭ್ಯ ಕೂಡಾ ದೊರಕುತ್ತಿಲ್ಲ. ಇದೇ ರೀತಿ ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ. 95 ರಷ್ಟು ಅನುದಾನ ಕಡಿತಗೊಳಿಸಿದೆ. ಇದಕ್ಕೆ ಸಂಘ ವಿರೋಧ ವ್ಯಕ್ತಪಡಿಸುತ್ತದೆ. ವಾರ್ಷಿಕ ರೂ 382 ಕೋಟಿ ಬಾಕಿ ವೇತನವನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಅನುಭವಿಸುತ್ತಿದ್ದಾರೆ. ಇದರಿಂದ ನೌಕರರ ಕುಟುಂಬ ಸಮಸ್ಯೆಗೆ ಒಳಗಾಗುತ್ತಿದೆ. ಪಂಚಾಯತಿ ನೌಕರರಿಗೆ ಬಡ್ತಿ ಸೌಲಭ್ಯ ಕೂಡಾ ದೊರಕುತ್ತಿಲ್ಲ. ಇದೇ ರೀತಿ ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ. 95 ರಷ್ಟು ಅನುದಾನ ಕಡಿತಗೊಳಿಸಿದೆ. ಇದಕ್ಕೆ ಸಂಘ ವಿರೋಧ ವ್ಯಕ್ತಪಡಿಸುತ್ತದೆ. ವಾರ್ಷಿಕ ರೂ 382 ಕೋಟಿ ಬಾಕಿ ವೇತನವನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ನವೆಂಬರ್ 26ರಂದು ಕೊಡಗು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಭರತ್ ತಿಳಿಸಿದರು.

ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಮತ್ತು ವೀರಾಜಪೇಟೆ ಕೇಂದ್ರಗಳಲ್ಲಿ ಅಂದು ನೌಕರರು ಕೋವಿಡ್ ನಿಯಮ ಪಾಲಿಸುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಪಿ. ಉಮೇಶ್, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಹೆಚ್.ಜಿ ನವೀನ್, ಕಾರ್ಯದರ್ಶಿ ಆರ್. ವಿಜಯ್, ಪದಾಧಿಕಾರಿ ಬಾಪು ಇದ್ದರು.