ಕುಶಾಲನಗರ, ನ. 22: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಭಾವಗೀತೆ ಕಾರ್ಯಕ್ರಮ ತಾ. 29ರಂದು ಬೆಳಿಗ್ಗೆ 10.30ಕ್ಕೆ ಕುಶಾಲನಗರದ ಕಾವೇರಿ ನಿಸರ್ಗ ಧಾಮ ಪ್ರವಾಸಿ ಕೇಂದ್ರದಲ್ಲಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಕಾರ್ಯಕ್ರಮ ವನ್ನು ಹಿರಿಯ ಪತ್ರಕರ್ತ ಜಿ. ಚಿದ್ವಿಲಾಸ್ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಆಶಯ ನುಡಿಗಳಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ತು ಮಡಿಕೇರಿ ತಾಲೂಕು ಅಧ್ಯಕ್ಷ ಎಚ್.ಟಿ. ಅನಿಲ್, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ನೌಕರರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಡಾ. ಚಿನ್ನಸ್ವಾಮಿ ಜಗನ್ನಾಥ್, ಕರ್ನಾಟಕ ನಾಟಕ ಅಕಾಡೆಮಿ ರಿಜಿಸ್ಟ್ರಾರ್ ಶೈಲಜಾ, ಕಸಾಪ ಜಿಲ್ಲಾ ನಿರ್ದೇಶಕ ಪಿಲಿಪ್‍ವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿ ಮಣಜೂರು ಮಂಜುನಾಥ್ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.
ಗೋಷ್ಠಿಯಲ್ಲಿ ಪರಿಷತ್ ತಾಲೂಕು ಅಧ್ಯಕ್ಷ ಎಂ.ಡಿ.ರಂಗಸ್ವಾಮಿ, ಬಿ.ಎ. ನಾಗೇಗೌಡ ಇದ್ದರು.