ಕುಶಾಲನಗರ, ನ. 22: ರಾಜ್ಯದ ಸ್ಥಳೀಯ ಆಡಳಿತ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯ ಅಧಿಸೂಚನೆಯನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಪಡಿಸಿದ ಹಿನ್ನೆಲೆ ಕುಶಾಲನಗರ ಪಟ್ಟಣ ವ್ಯಾಪ್ತಿಯ ಹಲವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿ ಸರಕಾರ ಸ್ಥಳೀಯ ಆಡಳಿತದಲ್ಲಿ ಮೀಸಲಾತಿಯನ್ನು ಮಾಡಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ‘ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿ, ಜನರು ನೀಡಿದ ಅಧಿಕಾರವನ್ನು ರಾಜ್ಯ ಸರಕಾರ ಮೊಟಕುಗೊಳಿಸಿರುವುದು ಬಹಿರಂಗವಾಗಿದೆ ಎಂದಿದ್ದಾರೆ. ಬಿಜೆಪಿ ನಗರಾಧ್ಯಕ್ಷರಾದ ಉಮಾಶಂಕರ್ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಕಾನೂನು ಪ್ರಕಾರ ಹೋರಾಟ ಮಾಡುವ ಮೂಲಕ ಮತ್ತೆ ಸ್ಥಳೀಯ ಆಡಳಿತ ಬಿಜೆಪಿ ತೆಕ್ಕೆಗೆ ಬರಲಿದೆ ಎಂಬ ಅಶಾಭಾವನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಮೂಲಕ ಜನಪ್ರತಿನಿಧಿಗಳಿಗೆ ಒಂದು ರೀತಿಯ ಅವಮಾನವಾದಂತಿದೆ ಎಂದು ಅಭಿಪ್ರಾಯ ತಿಳಿಸಿದರು. ಜೆಡಿಎಸ್ ನಗರಾಧ್ಯಕ್ಷ ಹಾಗೂ ಪ.ಪಂ. ಸದಸ್ಯ ವಿ.ಎಸ್.ಆನಂದಕುಮಾರ್ ಪ್ರತಿಕ್ರಿಯೆ ವ್ಯಕ್ತಪಡಿಸಿ, ಅಧಿಕಾರ ಗಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬಿಜೆಪಿ ಪಕ್ಷದ ಪರವಾಗಿ ಮೀಸಲಾತಿ ಮಾಡಿರುವುದು ಖಚಿತಗೊಂಡಿದೆ. ನ್ಯಾಯಾಲಯ ಮಾಡಿರುವ ಆದೇಶ ಸರಿಯಾದ ತೀರ್ಪು ಎಂದು ತಿಳಿಸಿದ್ದಾರೆ.