*ಸಿದ್ದಾಪುರ, ನ.22 : ಚೆನ್ನಯ್ಯನ ಕೋಟೆ ಗ್ರಾ.ಪಂ ವ್ಯಾಪ್ತಿಯ ದಿಡ್ಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ ಹಿನ್ನೆಲೆ ಗಿರಿಜನ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗಿರಿಜನ ಮುಖಂಡ ಜೆ.ಕೆ.ಅಪ್ಪಾಜಿ ಹಾಗೂ ಗ್ರಾಮಸ್ಥರು ದೂರು ನೀಡಿದ ಕಾರಣ ಟ್ಯಾಂಕ್ ಪರಿಶೀಲಿಸಿದ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸ್ಥಳೀಯ ಜಿ.ಪಂ ಸದಸ್ಯರ ವಿಶೇಷ ಕಾಳಜಿಯಿಂದ ಟ್ಯಾಂಕ್ ನಿರ್ಮಾಣಗೊಂಡಿದೆ.