ಕೂಡಿಗೆ, ನ. 22. ಸೋಮವಾರಪೇಟೆ ತಾಲೂಕು ಮಟ್ಟದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ದೈಹಿಕ ಶಿಕ್ಷಕರ ಕಾರ್ಯಾಗಾರ ಗೋಣಿಮರೂರು ಶಾಲಾ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ನೆರವೇರಿಸಿದರು. ನಂತರ ಮಾತಾಡಿದ ಅವರು. ದೈಹಿಕ ಶಿಕ್ಷಕರು ಸದೃಢವಾಗಿದ್ದರೆ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ದಾರಿಯಾಗುತ್ತದೆ ಎಂದರು.

ಕಾರ್ಯಾಗಾರದಲ್ಲಿ 2020- 21ನೇ ಸಾಲಿನ ದೈಹಿಕ ಶಿಕ್ಷಣದ ಮೌಲ್ಯ ಮಾಪನ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿಯ ಬಗ್ಗೆ ಕಾರ್ಯಾಗಾರದಲ್ಲಿ ಚರ್ಚೆಗಳು ನಡೆದವು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಣಿಮರೂರು ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ ಮಡಿವಾಳರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಾ. ಸದಾಶಿವ ಪಲೇದ್, ಸಂಪನ್ಮೂಲ ವ್ಯಕ್ತಿಗಳಾಗಿ ಪ್ರವೀಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಣಿಮರೂರು ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ ಮಡಿವಾಳರ್ ವಹಿಸಿದ್ದರು.