ಮಡಿಕೇರಿ, ನ. 22: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ Zomಚಿಣo, Sತಿiggಥಿ, Ubeಡಿ eಣs, ಂmಚಿzoಟಿ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25 ಸಾವಿರಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿ ತಿರಸ್ಕರಿಸಲಾಗುವುದು.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಪಡೆಯಬಹುದಾಗಿರುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಡಿಸೆಂಬರ್ 19 ರೊಳಗೆ ಸಲ್ಲಿಸುವುದು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು 08272-221656 ದೂರವಾಣಿ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚೆನ್ನರಸೇಗೌಡ ಅವರು ತಿಳಿಸಿದ್ದಾರೆ.