ಮಡಿಕೇರಿ, ನ. 22: ಜಿಲ್ಲೆಯಲ್ಲಿ ತಾ. 22 ರಂದು ಹೊಸದಾಗಿ 11 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 84,332 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,253 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,109 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು 73 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 18 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 3 ಮಂದಿ ಕೋವಿಡ್ ಕೇರ್ ಸೆಂಟರ್ ನಲ್ಲಿ, 52 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 79 ನಿಯಂತ್ರಿತ ವಲಯಗಳಿವೆ.