ಮಡಿಕೇರಿ, ನ. 23: ಪ್ರಸಕ್ತ (2020-21) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿನ ವಿದ್ಯಾರ್ಥಿಗಳಿಗೆ ಕೆಸಿಇಟಿ, ಎನ್‍ಇಇಟಿ, ಐಐಟಿ, ಜೆಇಇ ಮತ್ತು ಇತರ ಪ್ರವೇಶ ಪರೀಕ್ಷೆಗಳಿಗೆ ಉಚಿತ ಆನ್‍ಲೈನ್ ತರಬೇತಿ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 7 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದ್ದಾರೆ.