ಕೂಡಿಗೆ, ನ. 23: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಗ್ರಾಮಸ್ಥರಿಗೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ. ಕಂದಾಯ ಇಲಾಖೆಯ ಸೂಚನೆ ಮೇರೆಗೆ ಕೂಡಿಗೆ ಗ್ರಾಮ ಪಂಚಾಯತಿ ಆವರಣದಲ್ಲಿ ಆಧಾರ್ ಕಾರ್ಡ್ ನೋಂದಣಿ ಕಾರ್ಯ ಆರಂಭವಾಗಿದೆ.

ಇದಕ್ಕೆ ಚಾಲನೆಯನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಯಿಷಾ ನೀಡಿದರು ನಂತರ ಮಾತನಾಡುತ್ತಾ, ಗ್ರಾಮದ ಸಾರ್ವಜನಿಕರಿಗೆ ಆಧಾರ್ ಕಾರ್ಡ್‍ನ ಲೋಪ ದೋಷಗಳನ್ನು ಸರಿಪಡಿಸುವ ಮತ್ತು ಹೊಸದಾಗಿ ನೋಂದಣಿ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.