ಕಣಿವೆ, ನ. 23 : ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆಡಿನಾಡೂರು ಗ್ರಾಮದಲ್ಲಿ ಪಡಿತರ ವಿತರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ.ವಿಜಯ್, ಬಸವನಹಳ್ಳಿ ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರು, ಗಣಗೂರು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ.ಶಿವದಾಸ್, ಮುಖಂಡರಾದ ಬಿ.ಎಂ.ಪ್ರಭಾಕರ್, ವಿರೂಪಾಕ್ಷ, ಸಂಘದ ಮಾಜಿ ನಿರ್ದೇಶಕ ವೈ.ಎನ್.ರಾಜು, ಸಂಘದ ನಿರ್ದೇಶಕರು ಹಾಗೂ ಕಾರ್ಯದರ್ಶಿ ಅನಿಲ್ ಕುಮಾರ್ ಇದ್ದರು.