ಮಡಿಕೇರಿ, ನ. 23: ಜಿಲ್ಲೆಯಲ್ಲಿ ತಾ.23 ರಂದು ಹೊಸದಾಗಿ 6 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 85,076 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,259 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,127 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು, 61 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 19 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 40 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾ ದ್ಯಂತ 76 ನಿಯಂತ್ರಿತ ವಲಯಗಳಿವೆ.