*ಸಿದ್ದಾಪುರ, ನ. 24: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ಅಭ್ಯತ್‍ಮಂಗಲದ ಅತ್ತಿಮಂಗಲ-ಒಂಟಿಯಂಗಡಿ ರಸ್ತೆ ಬದಿಯಲ್ಲಿ ಕಸದ ರಾಶಿ ಸುರಿಯುತ್ತಿರುವವರನ್ನು ಪತ್ತೆಹಚ್ಚಿ ಕಸ ಸಹಿತ ಮೆರವಣಿಗೆ ಮಾಡಲಾಗುವುದೆಂದು ಸ್ಥಳೀಯ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಗ್ರಾ.ಪಂ. ಮಾಜಿ ಸದಸ್ಯ ಅಂಚೆಮನೆ ಸುಧಿ ಅವರು ನೀಡಿದ ದೂರಿನ ಹಿನ್ನೆಲೆ ಪಂಚಾಯಿತಿ ಕಾರ್ಯದರ್ಶಿ ರವಿ ಅವರು ರಸ್ತೆ ಬದಿಯ ಕಸದ ರಾಶಿಯನ್ನು ತೆರವುಗೊಳಿಸಲು ಕ್ರಮ ಕೈಗೊಂಡರು. ಈ ಸಂದರ್ಭ ಮಾತನಾಡಿದ ಗ್ರಾಮಸ್ಥರು ಸಿಸಿ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದರು.

ಕಳೆದ ಕೆಲವು ತಿಂಗಳುಗಳಿಂದ ರಸ್ತೆಯ ಬದಿಯಲ್ಲೇ ಕಸವನ್ನು ಸುರಿಯಲಾಗುತ್ತಿದ್ದು, ದುರ್ವಾಸನೆಯ ವಾತಾವರಣ ಮೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಸ ಹಾಕುವವರನ್ನು ನಾವೇ ಪತ್ತೆ ಹಚ್ಚಿ ಮೆರವಣಿಗೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.