ಮಡಿಕೇರಿ, ನ. 24: ಗ್ರಾ.ಪಂ. ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ರಾಜಕೀಯ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಕೆಪಿಸಿಸಿ ವಕ್ತಾರ ಹಾಗೂ ಮಾನವ ಹಕ್ಕು ಮತ್ತು ಆರ್‍ಟಿಐ ಘಟಕದ ಅಧ್ಯಕ್ಷ ಎ.ಎಸ್. ಪೆÇನ್ನಣ್ಣ ಅವರು ಸಂಪಾಜೆ, ಪೆರಾಜೆ ಹಾಗೂ ಚೆಂಬು ವಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದರು. ವಲಯಾಧ್ಯಕ್ಷ ಜಯರಾಮ ಅವರೊಂದಿಗೆ ಚರ್ಚಿಸಿದರು.

ಚೆಂಬು ವಲಯಾಧ್ಯಕ್ಷ ರವಿರಾಜ್ ಹೊಸೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ 15ಕ್ಕೂ ಹೆಚ್ಚು ಇತರ ಪಕ್ಷಗಳ ಕಾರ್ಯಕರ್ತರನ್ನು ಕಾಂಗ್ರೆಸ್ ಬಾವುಟ ನೀಡಿ ಬರಮಾಡಿ ಕೊಂಡರು. ನಂತರ ಮಾತನಾಡಿದ ಎ.ಎಸ್. ಪೆÇನ್ನಣ್ಣ, ಕಾಂಗ್ರೆಸ್ ಪಕ್ಷ ಜನರಿಗೆ ಅನಿವಾರ್ಯ ಎಂಬ ಸಂದೇಶವನ್ನು ಹೊಸ ಸದಸ್ಯರ ಸೇರ್ಪಡೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್ ಮಾತನಾಡಿ, ಕಾಂಗ್ರೆಸ್ ಜನಪರ ಕಾಳಜಿ ಹೊಂದಿರುವ ಪಕ್ಷವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆಂದು ಕರೆ ನೀಡಿದರು. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಟಿ.ಎಂ. ಶಾಹಿದ್, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ನಾಪೆÇೀಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೇಶ್ವರಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಆರ್.ಪಿ. ಚಂದ್ರಶೇಖರ್ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.

ಗುಂಡಿಮಜಲು ಗಣಪಯ್ಯ ಕಾರ್ಯಕ್ರಮ ನಿರೂಪಿಸಿದರು. ಸೂರಜ್ ಹೊಸೂರು ಸ್ವಾಗತಿಸಿ, ರವಿರಾಜ್ ವಂದಿಸಿದರು.