ಕುಶಾಲನಗರ, ನ. 24: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಕುಶಾಲನಗರದಲ್ಲಿ ನಡೆಯಿತು.
ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ತರಬೇತುದಾರರಾಗಿ ಪಾಲ್ಗೊಂಡಿದ್ದ ಉಪನ್ಯಾಸಕರಾದ ಡಾ. ಬಿ.ಡಿ. ಹರ್ಷ, ಟಿ.ಎಂ. ಸುಧಾಕರ್, ಬಿ.ಎಂ. ಮಹೇಶ್ಕುಮಾರ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆಗಳು, ತಯಾರಿ ಹಾಗೂ ಪೂರ್ವಸಿದ್ಧತೆಗಳ ಬಗ್ಗೆ ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಮಹೇಶ್, ಚುನಾವಣಾ ಶಿರಸ್ತೆದಾರ್ ಲೋಹಿತ್ ಸೇರಿದಂತೆ 80ಕ್ಕೂ ಅಧಿಕ ಮಂದಿ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಪಾಲ್ಗೊಂಡಿದ್ದರು.