ಶನಿವಾರಸಂತೆ, ನ. 24: ಹಾಸನ 220 ಏಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವಿರುವುದರಿಂದ ತಾ. 25ರಂದು (ಇಂದು) ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆವಿ ಶನಿವಾರಸಂತೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಶನಿವಾರಸಂತೆ ವಿಭಾಗದ ಚಾ.ವಿ.ಸ.ನಿ.ನಿ. ಶಾಖಾಧಿಕಾರಿ ಕಿರಿಯ ಇಂಜಿನಿಯರ್ ತಿಳಿಸಿದ್ದಾರೆ.