ಮಡಿಕೇರಿ, ನ. 24: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ವಕೀಲರ ಸಂಘ ಮತ್ತು ಮಡಿಕೇರಿ ರೋಟರಿ ಇವರ ಸಂಯುಕ್ತ ಆಶ್ರಯದಲ್ಲಿ ತಾ. 26 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರೋಟರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ರೋಟರಿ ಅಧ್ಯಕ್ಷ ಪಿ.ಟಿ. ಗಣಪತಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಪೊಲೀಸ್ ಇಲಾಖೆಯ ಉಪಾಧೀಕ್ಷಕ ದಿನೇಶ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಎಫ್‍ಎಂಕೆಎಂಸಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ರಘು, ಇತರರು ಪಾಲ್ಗೊಳ್ಳಲಿದ್ದಾರೆ.