ಮಡಿಕೇರಿ, ನ. 24: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸಾಮಥ್ರ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ ಕಾರ್ಯಕ್ರಮವು (2021-22) ತಾ. 26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಲೀಡ್ ಬ್ಯಾಂಕ್ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಭಾಂಗಣದಲ್ಲಿ ನಡೆಯಲಿದೆ. ಶಾಸಕರು, ಸಂಸದರು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಪಿ.ಬಿ. ಶ್ರೀನಿವಾಸ್ ತಿಳಿಸಿದ್ದಾರೆ.