ಮಡಿಕೇರಿ, ನ. 25: ಕೊಡಗು ಜಿಲ್ಲೆಯ ಪೆÇನ್ನಂಪೇಟೆಯನ್ನು ನೂತನ ತಾಲೂಕು ಕೇಂದ್ರವನ್ನಾಗಿ ಈಗಾಗಲೇ ಘೋಷಣೆ ಮಾಡಿದ್ದು, ಈ ಹಿನ್ನೆಲೆ ಸರ್ಕಾರ ಶೀಘ್ರ 12 ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅವರು ತಿಳಿಸಿದ್ದಾರೆ.ಈ 12 ಹುದ್ದೆಗಳಲ್ಲಿ ತಹಶೀಲ್ದಾರರು, ಶಿರಸ್ತೆದ್ದಾರರು, ಪ್ರಥಮ ದರ್ಜೆ ಸಹಾಯಕರು, ಆಹಾರ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇಮಕ ಮಾಡುವುದರ ಜೊತೆಗೆ ಹೊರಗುತ್ತಿಗೆ ಅಡಿ ಬೆರಳಚ್ಚುಗಾರರು, ವಾಹನ ಚಾಲಕರು, ಮತ್ತು ಡಿ ಗ್ರೂಪ್ ನೌಕರರನ್ನು ನಿಯೋಜಿಸಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕರು ತಿಳಿಸಿದ್ದಾರೆ. ಹೊಸ ತಾಲೂಕು ರಚನೆಗಾಗಿ 25 ಲಕ್ಷ ರೂ. ಬಿಡುಗಡೆ ಮಾಡಿದ್ದು, ಹೊಸ ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೆÇನ್ನಂಪೇಟೆ ತಾಲೂಕು ಕೇಂದ್ರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅವರು ಮಾಹಿತಿ ನೀಡಿದ್ದಾರೆ.