ಮಡಿಕೇರಿ, ನ. 25: ಭಾಗಮಂಡಲ ಗ್ರಾಮ ಪಂಚಾಯಿತಿ 2019-20ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮಸಭೆ ನೋಡಲ್ ಅಧಿಕಾರಿ ಸಿ. ವಿರೂಪಾಕ್ಷ ಭೂದಾಖಲೆಗಳ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಾ. 27 ರಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಅಪರಾಹ್ನ 2.30 ಗಂಟೆಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2019-20ನೇ ಸಾಲಿನ ಜಮಾಬಂದಿ ಸಭೆ ನೋಡೆಲ್ ಅಧಿಕಾರಿ ಪಿ.ಪಿ. ಕವಿತ, ಬಿ.ಸಿ.ಎಂ. ವಿಸ್ತರಣಾಧಿಕಾರಿ ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.